ಎತ್ತಿನಹೊಳೆ ಕಾಮಗಾರಿಗೆ ಬೃಹತ್ ಗಾತ್ರದ ಪೈಪ್ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪೈಪ್ ಸಮೇತ ಲಾರಿ ಪಲ್ಟಿ ಹೊಡೆದ ಕಾರಣಕ್ಕೆ ಮುರಿದು ಬಿದ್ದ ಕಾರಣ ವಿದ್ಯುತ್ ಕಂಬಗಳು, ದೇವಾಲಯ ಹಾನಿಗೊಳಗಾಗಿವೆ.
ಚಾಲಕ ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಕಾರಣಕ್ಕೆ ಲಾರಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಆರೋಪ ಕೇಳಿಬಂದಿದೆ.
ಪರವಾನಿಗೆ ಪಡೆಯದೇ ಪೈಪ್ ಗಳ ದಾಸ್ತಾನು ಮತ್ತು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರ ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.