ಡಿ.27ರಂದು ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯಿತು. ಈ ಹಿನ್ನೆಲೆ, ಹೋರಾಟದಲ್ಲಿ ಭಾಗಿಯಾಗಿದ್ದ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಜೊತೆ ಬಂಧಿತರಾಗಿ ಜೈಲು ಸೇರಿ ಜಾಮೀನು ಪಡೆದು ಬಿಡುಗಡೆಗೊಂಡ ರಾಜ್ಯ ಉಪಾಧ್ಯಕ್ಷರಾದ ಪುಟ್ಟೇಗೌಡರು, ಸಣ್ಣ ವೀರಪ್ಪಣ್ಣನವರು ಹಾಗೂ ಕಾರ್ಯಕರ್ತರಿಗೆ ಕರವೇ ಮುಖಂಡರಿಂದ ಸನ್ಮಾನ ನಡೆಯಿತು.
ಕರವೇ ರಾಜ್ಯಾಧ್ಯಕ್ಷ ಸೇರಿದಂತೆ ಸುಮಾರು 53 ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಸುಮಾರು 14 ದಿನ ಜೈಲುವಾಸ ಅನುಭವಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಹಿನ್ನೆಲೆಯಲ್ಲಿ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಅನ್ನಪೂರ್ಣ, ಗಾಯತ್ರಿ, ಜಯಪ್ರಕಾಶ್, ಪ್ರಕಾಶ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ್ ಗೌಡ, ಹಾಗೂ ದೊಡ್ಡಬಳ್ಳಾಪುರ ಕಾರ್ಯಕರ್ತರು, ಯಲಹಂಕ ಕಾರ್ಯಕರ್ತರು ಉಪಸ್ಥಿತರಿದ್ದರು.