ದೊಡ್ಡಬಳ್ಳಾಪುರ ನಗರ ಉಪ ವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರ ಕುಂದುಕೊರತೆ ನಿವಾರಣೆ ಸಭೆ ಹಾಗೂ ಸುರಕ್ಷತಾ ದಿನವನ್ನ ಜ.20ರಂದು ಮಧ್ಯಾಹ್ನ 3ಗಂಟೆಗೆ ಎಪಿಎಂಸಿ ಮಾರುಕಟ್ಟೆ ಎದುರಿನ ಬೆಸ್ಕಾಂ ನಗರ ಉಪವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಸ್ಕಾಂ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ತಮ್ಮ ಕುಂದುಕೊರತೆ, ನ್ಯೂನ್ಯತೆಗಳಿದ್ದಲ್ಲಿ ಸಭೆಯಲ್ಲಿ ಪ್ರಚುರಪಡಿಸಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಬೆವಿಕಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.