ಬೈಕ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿರುವ ಘಟನೆ ನಗರದ ಟಿಬಿ ವೃತ್ತದಲ್ಲಿ ನಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಪೆಟ್ರೋಲ್ ಟ್ಯಾಂಕರ್ ಚಕ್ರದ ಕೆಳಗೆ ಬೈಕ್ ಸಿಲುಕಿ ನುಜ್ಜುಗುಜ್ಜಾಗಿದೆ, ಸ್ಥಳಕ್ಕೆ ನಗರ ಠಾಣಾ ಪೊಲೀಸರು ಧಾವಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ, ಪರಿಶೀಲನೆ ನಡೆಸಿದರು.
ಕೆಳಗಿನಜೂಗಾನಹಳ್ಳಿ ನಿವಾಸಿ ಹನುಮಂತರಾಯಪ್ಪ ಎಂಬುವವರಿಗೆ ಅಪಘಾತದಲ್ಲಿ ಗಾಯಗಳಾಗಿವೆ.
ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.