ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ನಿರ್ವಹಣೆ ಇಲಾಖೆ ವತಿಯಿಂದ ನಿವೃತ್ತ ನೌಕರರ ಪಿಂಚಣಿ ಕುಂದು ಕೊರತೆಗೆ ಸಂಬಂಧಿಸಿದಂತೆ ಜನವರಿ 24(ಬುಧವಾರ) ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿರುತ್ತದೆ.
ನಿವೃತ್ತ ಪಿಂಚಣಿದಾರರು ಇದರ ಸದುಪಯೋಗ ಪಡೆದುಕೊಳ್ಳಲು ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.