ಬೈಕ್ ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಾನುಕುಂಟೆ ಸಮೀಪದ ಪ್ರೆಸಿಡೆನ್ಸಿ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.
ರಾಜನುಕುಂಟೆಯಿಂದ ಬರುತ್ತಿದ್ದ ಕ್ಯಾಂಟರ್ ಗೆ ದಿಬ್ಬೂರು ಕಡೆಯಿಂದ ಬಂದಂತಹ ಬೈಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕೊಡುಗು ಮೂಲದ ಮೌನೀಶ್ ಮಂದಣ್ಣ ಸ್ಥಳದಲ್ಲೇ ಸಾವನ್ನಪ್ಪಿದ ವಿದ್ಯಾರ್ಥಿ. ರಾಜಾನುಕುಂಟೆ ಸಮೀಪದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಫೈನಲ್ ಇಯರ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಇಂದು ಕೊನೆಯ ಪರೀಕ್ಷೆಯನ್ನು ಬರೆದು ಸ್ನೇಹಿತನ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಜವರಾಯನ ಅಟ್ಟಹಾಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ರಾಜನುಕುಂಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.