ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಹಾಗೂ ಹುತಾತ್ಮರ ದಿನದಂದು ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಗಾಂಧಿ ಸಮಾಧಿ ಬಳಿ ಸರ್ವ ಧರ್ಮ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.
ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿ ಸರ್ವ ಧರ್ಮ ಪ್ರಾರ್ಥನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪಾಲ್ಗೊಂಡಿದ್ದರು.
ಈ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಾಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ರಾಷ್ಟ್ರ ಮಟ್ಟದ ನಾಯಕರು ಭಾಗವಹಿಸಿದ್ದರು.