ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಸಮೀಪದ ಅನಿಬೆಸೆಂಟ್ ಪಾರ್ಕ್ ರಸ್ತೆಯಲ್ಲಿನ ಬೇಕರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೇಕರಿಯಲ್ಲಿನ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಇಂದು ಮುಂಜಾನೆ ಶಿವು ಎಂಬುವರ ಎಲ್.ಜೆ.ಅಯ್ಯಂಗಾರ್ ಬೇಕರಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ವ್ಯಾಪಿಸಿ, ಬೇಕರಿಯಲ್ಲಿನ ತಿಂಡು ತಿನಿಸುಗಳು ಸೇರಿದಂತೆ ಇತರೆ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.