ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯೊಬ್ಬರನ್ನು 112 ಸಹಾಯವಾಣಿ ಪೊಲೀಸರು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬಂದು ದೂರುದಾರರ ಪ್ರಾಣ ಉಳಿಸಿದ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಎಎಸ್ಪಿ-2 ನಾಗರಾಜ್ ಅವರು ಪ್ರಶಂಶಿಸಿದ್ದಾರೆ.
ERSS( ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್)-112 ಸಿಬ್ಬಂದಿಯಾದ ಅಭಿಷೇಕ್ (ಪಿಸಿ) ಹಾಗೂ ಶಿವರಾಜ್(ಎಪಿಸಿ) ಅವರು ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಳೆಕೋಟೆ ಗ್ರಾಮಕ್ಕೆ ಹೋಗಿದ್ದರು.
ಈ ವೇಳೆ ದೂರೂರಾರರು ಮನೆಯ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಇದನ್ನು ಗಮನಿಸಿದ 112 ಸಿಬ್ಬಂದಿ ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ಮನೆಯ ಬಾಗಿಲು ಒಡೆದು ಅವರನ್ನು ರಕ್ಷಿಸಿ, ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದರು.
ದೂರುದಾರ ವ್ಯಕ್ತಿಯೊಬ್ಬರಿಗೆ ಸಮಯೋಚಿತವಾಗಿ ಸ್ಪಂದಿಸಿ ಮಾನವೀಯತೆ ಮೆರೆದ ಹಾಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸನ್ಮಾನಿಸಿ ಸನ್ಮಾನಿಸಿ ಪ್ರಸಂಶನಾ ಪತ್ರ ನೀಡಿದರು.