ಯುವನಿಧಿ ಜೊತೆಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡುವ ತರಬೇತಿ ನೀಡಲು ಕ್ರಮ- ಸಿಎಂ ಸಿದ್ದರಾಮಯ್ಯ

ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈದಾನದಲ್ಲಿ ನಡೆದ ‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40% ಗೆ ಏರಿಕೆಯಾಗಿದೆ ಎಂದರು.

ನಾವು ಯುವ ನಿಧಿಯನ್ನೂ ಕೊಡುತ್ತೇವೆ, ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ವಿದ್ಯಾರ್ಥಿ ಮತ್ತು ಯುವಜನರಿಗೆ ಮೇಲಿರುವ ನಮ್ಮ ಸರ್ಕಾರದ ಅಭಯ ಎಂದು ಹೇಳಿದರು.

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿ ಯುವ ಜನರು ಹಾಜರಿದ್ದರು.

Leave a Reply

Your email address will not be published. Required fields are marked *