ದೊಡ್ಡಬಳ್ಳಾಪುರ: ಇಂದಿನಿಂದ (ಮಾರ್ಚ್.1) ಪ್ರಾರಂಭವಾಗಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ 9,928 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ನೆಲಮಂಗಲದಲ್ಲಿ 5 ಪರೀಕ್ಷಾ ಕೇಂದ್ರಗಳಿವೆ. ಹೊಸಕೋಟೆ 4, ದೇವನಹಳ್ಳಿ 3 ಹಾಗೂ ದೊಡ್ಡಬಳ್ಳಾಪುರದಲ್ಲಿ 3 ಪರೀಕ್ಷಾ ಕೇಂದ್ರಗಳಿವೆ.
ಜಿಲ್ಲೆಯಲ್ಲಿ ಕಲಾ ವಿಭಾಗದಲ್ಲಿ 1,024, ವಾಣಿಜ್ಯ ವಿಭಾಗದಲ್ಲಿ 4,812, ವಿಜ್ಞಾನ ವಿಭಾಗದಲ್ಲಿ 3,856 ಜನ ವಿದ್ಯಾರ್ಥಿಗಳು ಇದ್ದಾರೆ.
236 ಜನ ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ ಪಡೆದಿದ್ದಾರೆ.
ಒಟ್ಟಾರೆ 5,425 ವಿದ್ಯಾರ್ಥಿನಿಯರು, 4,267 ಜನ ವಿದ್ಯಾರ್ಥಿಗಳು ಇದ್ದಾರೆ.
ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಅದರಂತೆ ಎಲ್ಲಾ ಸಿದ್ಧತೆಗಳ ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.