ಪ್ರಜಾವಾಣಿ ಅಮೃತಮಹೋತ್ಸವದ ಅಂಗವಾಗಿ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ಕಾರ್ಯಕ್ರಮ ಫೆ.8 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್ಎಲ್ಜೆಐಟಿ ಕ್ಯಾಂಪಸ್ನಲ್ಲಿನ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ನಡೆಯಲಿದೆ.
ಉಪನ್ಯಾಸ ಕಾರ್ಯಕ್ರಮವನ್ನು ಐಎಎಸ್ ಅಧಿಕಾರಿ ಸಿ.ಎಸ್.ಕರೀಗೌಡ ಉದ್ಘಾಟಿಸಲಿದ್ದಾರೆ. ಪ್ರಜಾವಾಣಿ ಅಮೃತಮಹೋತ್ಸವ ಕುರಿತು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವಿಂದ್ರಭಟ್ಟ ಅವರು ಮಾತನಾಡಲಿದ್ದಾರೆ.
ಬೆಂಗಳೂರಿನ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ಎಲ್.ಸವಿತಾ ಪರೀಕ್ಷಾ ದಿಕ್ಸೂಚಿ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ ವಹಿಸಲಿದ್ದಾರೆ.
ಸಮಾರಂದಲ್ಲಿ ಮುಖ್ಯಅತಿಥಿಗಳಾಗಿ ಶ್ರೀದೇವರಾಜ ಅರಸು ಏಜುಕೇಷನ್ ಟ್ರಸ್ಟ್ ಅಧ್ಯಕ್ಷ ಜಿ.ಎಚ್.ನಾಗರಾಜ್,ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಜಿಲ್ಲಾ ಉಪನಿರ್ದೇಶಕ ಶ್ರೀಕಂಠ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಭಾಗವಹಿಸಲಿದ್ದಾರೆ. ಜವಹಾರ್ ನವೋದಯ ವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ನಾಡಗೀತೆಯನ್ನು ಹಾಡಲಿದ್ದಾರೆ.