ತಾಲೂಕಿನ ಕಸಬಾ ಹೋಬಳಿಯ ಕೋಡಿಹಳ್ಳಿ ಗ್ರಾಮದ ಎಂ.ಪಿ.ಸಿ.ಎಸ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಎ, ಉಪಾಧ್ಯಕ್ಷರಾಗಿ ರಾಜಣ್ಣ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಗಣ್ಯರು ಹೂಮಾಲೆ ಹಾಕುವ ಮೂಲಕ ಶುಭಕೋರಿದರು.
ಸಂದರ್ಭದಲ್ಲಿ ಗ್ರಾಪಂ ಸದಸ್ಯ ಅಶ್ವತ್ಥ್ ನಾರಾಯಣ, ಚೈತ್ರ ಸುರೇಶ್, ಪುಷ್ಪ ಶಿವಕುಮಾರ್, ವಿಎಸ್ಎಸ್ಎನ್ ಅಧ್ಯಕ್ಷ ಕೆ.ಕೆ.ಅಂಜಿನಪ್ಪ, ಎಸ್ ಡಿ ಎಂ ಸಿ ಅಧ್ಯಕ್ಷ ರಾಮಕೃಷ್ಣಪ್ಪ, ನಿರ್ದೇಶಕರಾದ ರಮೇಶ್, ಬಿರೇಶ್, ಚನ್ನಪ್ಪ, ಅಕ್ಕಾಯ್ಯಮ್ಮ, ನಾಗರಾಜು ಹಾಜರಿದ್ದರು.