ಇಂದಿನಿಂದ14ನೇ ಆವೃತ್ತಿಯ ಏರ್ ಶೋ; ಏರ್ ಶೋ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ನಡೆಯುವ 14 ನೇ ಆವೃತ್ತಿ ಯ ಏರೋ ಇಂಡಿಯಾ ಶೋ ಉದ್ಘಾಟನೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಿ ಮೋದಿಯವರನ್ನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಒಟ್ಟು 98 ದೇಶಗಳ 811 ಪ್ರದರ್ಶಕರು ಭಾಗವಹಿಸಲಿದ್ದಾರೆ. 75 ಸಾವಿರ ಕೋಟಿ ರೂ. ವಹಿವಾಟಿನ 251 ರಕ್ಷಣಾ ಉಪಕರಣಗಳು, ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ವಿವಿಧ ಕಂಪನಿಗಳು ಸಹಿ ಹಾಕುವ ನಿರೀಕ್ಷೆ ಇದೆ.

ಫೆ.13ರಿಂದ 17ರವರೆಗೆ ಯಲಹಂಕ ವಾಯುನೆಲೆಯ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ ನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ.

1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ರಕ್ಷಣಾ ಉಪಕರಣ‌ಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.

32 ದೇಶಗಳ ರಕ್ಷಣಾ ಸಚಿವರು, ಜಾಗತಿಕ ಮತ್ತು ಭಾರತದ 73 ಪ್ರಮುಖ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಭಾಗವಹಿಸಲಿದ್ದು, ಮಹತ್ವದ ಚರ್ಚೆಗಳು ಮತ್ತು ಒಪ್ಪಂದಗಳು ನಡೆಯುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *