ಕೋಲಾರ: ಸರ್ವರಿಗೂ ಸಮಪಾಲು ಸಮಬಾಳು ಎಂಬ ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷ ಹೆಚ್ಚು ಮತದಾರರಿರುವ ಬಲಗೈ ಸಮುದಾಯದಲ್ಲಿನ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಎಸ್ಸಿ ಘಟಕದ ಮಾಜಿ ರಾಜ್ಯ ಉಪಾಧ್ಯಕ್ಷ ಡಾ.ಅಶ್ವತ್ ನಾರಾಯಣ ಅಂತ್ಯಜ ಹೈಕಮಾಂಡ್ ಅನ್ನು ಮನವಿ ಮಾಡಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸ್ವಾತಂತ್ರ ಬಂದಾಗಿನಿಂದ ಪರಿಶಿಷ್ಟ ಜಾತಿ ಅಸ್ಪೃಶ್ಯ ಸಮುದಾಯದ ಎಡಗೈ ಸಮಾಜದಿಂದ ಲೋಕಸಭೆಗೆ ಹೆಚ್ಚು ಅವಕಾಶ ನೀಡಲಾಗಿದೆ 1952 ರಿಂದ ಇಂದಿನವರೆಗೂ ಬಲಗೈ ಸಮುದಾಯಕ್ಕೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅವಕಾಶ ನೀಡದೆ ವಂಚನೆ ಮಾಡಿದೆ ಸಮುದಾಯದ ಅಭಿವೃದ್ಧಿಗೆ ಬಲಗೈ ಸಮುದಾಯಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ ನಾನು ಕೂಡ ಕಳೆದ 30 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದು, ಜನತೆಯಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ಸೇರಿದಂತೆ ಜಿಲ್ಲಾ ಪಂಚಾಯತಿ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ, ನನಗೆ ರಾಜ್ಯ ಸರ್ಕಾರದಿಂದ ನಿಗಮ ಮಂಡಳಿ ಸ್ಥಾನ ಹಾಗೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು, ಆದರೆ, ಅದು ಯಾವುದು ಸಹ ಸಾಧ್ಯವಾಗಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಿದ್ದೇನೆ ಈಗಾಗಲೇ ಬೂತ್ ಮಟ್ಟದಲ್ಲಿ ಭೇಟಿ ನೀಡಿ ಕಾರ್ಯಕರ್ತರು ಹಾಗೂ ನಾಯಕರ ಜೊತೆ ಚರ್ಚೆ ಮಾಡಿದ್ದೇನೆ.ನನ್ನ ಹಿರಿತನ ಹಾಗೂ ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಗಣಿಸಿ ವರಿಷ್ಠರು ಕೋಲಾರ ಲೋಕಸಭೆ ಕ್ಷೇತ್ರದಿಂದ ಬಲಗೈ ಸಮುದಾಯಕ್ಕೆ ಸೇರಿದ ನನಗೆ ಸ್ಪರ್ಧೆ ಮಾಡಲು ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಬೆಗ್ಲಿ ರಾಮಚಂದ್ರ ಮಾತನಾಡಿ ಕಳೆದ 30 ವರ್ಷಗಳಿಂದ ಪಕ್ಷದ ಸಂಘಟನೆ ಹಾಗೂ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ
ಬಲಗೈ ಸಮುದಾಯದ ಮುಖಂಡರಾದ
ಡಾ. ಅಶ್ವತ್ ನಾರಾಯಣ ಅಂತ್ಯಜ ರವರು
ಸೂಕ್ತ ಅಭ್ಯರ್ಥಿಯಾಗಿದ್ದು, ಅವರ ಸೇವೆಯನ್ನು ಪಕ್ಷದ ವರಿಷ್ಠರು ಗಣನೆಗೆ ತೆಗೆದುಕೊಂಡು ಅವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.
ಈ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ವಿಭಾಗದ ಉಪಾಧ್ಯಕ್ಷ ನಂಜುಂಡಪ್ಪ, ಜನಸೇವಾ ಅಲ್ಪಸಂಖ್ಯಾರ ಸೊಸೈಟಿ ಜಿಲ್ಲಾ ಅಧ್ಯಕ್ಷ ಎ. ಸೈಯದ್ ಪಾಷ ಇದ್ದರು