ಇಂದು ನಾಡಿನಾದ್ಯಂತ ಶಾಂತಿ ಮತ್ತು ಭ್ರಾತೃತ್ವದ ಸಂಕೇತವಾದ ರಂಜಾನ್ (ಈದ್ ಉಲ್ ಫಿತರ್) ಹಬ್ಬ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಸ್ಲಿಂ ಬಾಂಧವರು ಹೊಸ ಬಟ್ಟೆ ತೊಟ್ಟು ಮಸೀದಿಗಳಿಗೆ ತೆರಳಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈದ್ಗಾ ಮೈದಾನಗಳಲ್ಲಿ ಪ್ರಾರ್ಥನೆ ಮುಗಿಯುತ್ತಲೇ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.
ಮಾನವ ಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್ ರವರ ಮೇಲೆ ಪವಿತ್ರ ಕುರಾನ್ ಅವತೀರ್ಣಗೊಂಡ ಗೌರವಾರ್ಥ ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂತಹ ಎಲ್ಲಾ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರಗೊಳಿಸುವ ಉದ್ದೇಶದ ಒಂದು ತಿಂಗಳ ಕಠಿಣ ವ್ರತಾಚರಣೆಯ ಬಳಿಕ ಬರುವ ರಂಜಾನ್ ಹಬ್ಬವನ್ನ ಬಹಳ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಯಿತು.
ಎಲ್ಲಾ ಜನರು ಸುಖ, ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಬದುಕಬೇಕು ಎಂದು ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ ಎಂದು ಮುಸ್ಲಿಂ ಬಾಂಧವರು ತಿಳಿಸಿದ್ದಾರೆ.