ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನದಲ್ಲಿ ಕಳೆದ 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಪೇಪರ್ ಒಳಗೊಂಡ ಹಾರದಲ್ಲಿ (ಹಾರದ ದಿಂಡಿನೊಳಗೆ) ಮಾಂಸದ ತುಂಡು ಇಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ನಡೆದಿದೆ.
ಕಳೆದ ಹದಿನೈದು ದಿನಗಳ ಹಿಂದೆ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮಾ ದೇವಾಲಯಕ್ಕೆ ಬಂದ ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೇವಾಲಯದ ಸಿಬ್ಬಂದಿ ದೂರು ನೀಡಿದ್ದಾರೆ.
ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಇಬ್ಬರು ಯುವಕರು ಬಂದಿದ್ದಾರೆ. ದೇವರಿಗೆ ಹಾಕಿ ಎಂದು ಹೂವಿನ ಹಾರದ ಮಧ್ಯೆ ಬರುವ ಪ್ಲಾಸ್ಟಿಕ್ ಪೇಪರ್ ಒಳಗಡೆ (ದಿಂಡು) ಮಾಂಸವಿಟ್ಟು ದೇವಸ್ಥಾನದ ಸಿಬ್ಬಂದಿಗೆ ನೀಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕವರ್ ತೆಗೆದುಕೊಂಡ ಸಿಬ್ಬಂದಿ, ದೇವರಿಗೆ ಹಾರ ಹಾಕಲೆಂದು ಗರ್ಭಗುಡಿಯೊಳಗೆ ಹೋಗವಾಗ, ಮಾಂಸದ ತುಂಡು ಹಾರದಿಂದ ಕೆಳಗೆ ಬಿದ್ದಿದೆ. ಕೂಡಲೇ ದೇವಸ್ಥಾನದ ಸಿಬ್ಬಂದಿ ಕವರ್ ಹೊರಗೆ ಎಸೆದಿದ್ದಾರೆ.
ಇನ್ನು ಈ ಕೃತ್ಯಕ್ಕೆ ಕಾರಣರಾದ ಕಿಡಿಗೇಡಿಗಳು ದೇವಸ್ಥಾನಕ್ಕೆ ಬಂದು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೇವಾಲಯದ ಸಿಬ್ಬಂದಿ ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ದೇವಸ್ಥಾನದಲ್ಲಿ ಪೇಪರ್ ದಿಂಡು ಒಳಗೊಂಡ ಹಾರಗಳನ್ನು ನಿಷೇಧಿಸಿದೆ.