ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಸಮುದಾಯದ ಸಭೆಗೆ ಆಹ್ವಾನ

ಕೋಲಾರ: ಮೀಸಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೋಲಾರ ಜಿಲ್ಲೆಯ ಆರು ತಾಲೂಕುಗಳು ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮತ್ತು ಚಿಂತಾಮಣಿಯ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಸಮುದಾಯದ ಮುಖಂಡರ ಮತ್ತು ಅಭಿಮಾನಿಗಳ ಸಭೆಯನ್ನು ಏ.21 ರಂದು ಭಾನುವಾರ ಮಧ್ಯಾಹ್ನ 3:30 ಕ್ಕೆ ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಕರೆಯಲಾಗಿದ್ದು ಸಮಯದಾಯ ಹೆಚ್ಚಿನ ಬಂಧುಗಳು ಸಭೆಯಲ್ಲಿ ಭಾಗವಹಿಸುವಂತೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಮನವಿ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಆಹ್ವಾನಿಸಿದ ಅವರು, ಈ ಸಭೆಗೆ ರಾಜ್ಯ ಸರಕಾರದ ಸಚಿವರಾದ ಸಿ.ಬಿ.ಕೃಷ್ಣಬೈರೇಗೌಡ, ಡಾ.ಎಂ.ಸಿ ಸುಧಾಕರ್, ಮಾಜಿ ಸಚಿವರಾದ ಕೆ.ಶ್ರೀನಿವಾಸಗೌಡ, ವಿ ಮುನಿಯಪ್ಪ, ಶಾಸಕ ಕೆ.ವೈ ನಂಜೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ರಾಜೀವ್ ಗೌಡ, ಪುಟ್ಟ ಅಂಜಿನಪ್ಪ, ಸೇರಿದಂತೆ ಸಮುದಾಯದ ಹಿರಿಯ ನಾಯಕರು ಭಾಗವಹಿಸಲಿದ್ದು ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದವರು ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *