ನಿಂತಿದ್ದ ಲಾರಿಯ ಕೆಳಗಡೆ ನುಗ್ಗಿದ ವೇಗವಾಗಿ ಬಂದು ಕಾರು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮುನಗಲಾ ಮಂಡಲದ ಮುಕುಂದಪುರಂ ಬಳಿ ನಡೆದಿದೆ.
ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.