ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ಅವರ ಚುನಾವಣಾ ಪ್ರಚಾರದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಮಾಧವಿ ಲತಾ ಅವರನ್ನು ಅಪ್ಪಿಕೊಂಡು ಹಸ್ತಲಾಘವ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆ ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಕೆ. ಶ್ರೀನಿವಾಸ ರೆಡ್ಡಿ ಅವರು ಅಮನಾತು ಮಾಡಿದ್ದಾರೆ.
ಎಎಸ್‌ಐ ಕರ್ತವ್ಯದಲ್ಲಿರುವಾಗ ಲತಾ ಅವರನ್ನು ತಬ್ಬಿಕೊಂಡು ಹಸ್ತಲಾಘವ ಮಾಡಿರುವ ವಿಡಿಯೋದಲ್ಲಿ ಸೆರೆಯಾಗಿದ್ದು. ಈ ಘಟನೆಯು ಹಿರಿಯ ಅಧಿಕಾರಿಗಳ ವಿಚಾರಣೆಗೆ ಕಾರಣವಾಯಿತು, ಇದರ ಪರಿಣಾಮವಾಗಿ ಎಎಸ್ಐ ಅವರನ್ನ ಅಮಾನತುಗೊಳಿಸಲಾಗಿದೆ.
ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಕೂಡ ಇತ್ತೀಚೆಗೆ ಬೇಗಂ ಬಜಾರ್‌ನಲ್ಲೊಲಿ ಮಸೀದಿಯತ್ತ ಬಾಣದ ಸನ್ನೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.