ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತಕ್ಷಣ ಪರಿಹಾರ ಒದಗಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಪ್ರತಿ ಮಾಹೆಯ 2ನೇ ಹಾಗೂ 4ನೇ ಸೋಮವಾರ ಕುಡಿಯುವ ನೀರಿನ ಸಮಸ್ಯೆಗಳ ವಸ್ತು ಸ್ಥಿತಿ ಬಗ್ಗೆ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತಿದೆ.
ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ 24/7 ಜಿಲ್ಲೆಯಲ್ಲಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಸಾರ್ವಜನಿಕರು ಉಚಿತ ದೂರವಾಣಿ ಸಂಖ್ಯೆ 080-22221050 ಕರೆ ಮಾಡಿ ಸಮಸ್ಯೆಯನ್ನು ತಿಳಿಸಬಹುದಾಗಿದೆ.
24/7 ಕಂಟ್ರೋಲ್ ರೂಂ ನಲ್ಲಿನ ಕರ್ತವ್ಯನಿರತ ಸಿಬ್ಬಂದಿ ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕರೆಗಳನ್ನು ಸ್ವೀಕರಿಸಿ, ದೂರುಗಳನ್ನು ದಾಖಲಿಸಿಕೊಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸುವ ಬಗ್ಗೆ ಕ್ರಮವಹಿಸಲಾಗುತ್ತದೆ.
ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.