ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ, ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ, ತಾಲ್ಲೂಕು ಶಿವರಾಜ್ ಕುಮಾರ್ ಕನ್ನಡ ಸೇವಾ ಸಮಿತಿ ಹಾಗೂ ಶ್ರೀ ಗಂಗಾ ಭಗತ್ ಸಿಂಗ್ ಚಂದ್ರಶೇಖರ್ ಆಜಾದ್ ಆಸ್ಪತ್ರೆ ಸಹಯೋಗದೊಂದಿಗೆ “ಕರ್ನಾಟಕ ರತ್ನ, ಪದ್ಮಭೂಷಣ ಡಾ. ರಾಜಕುಮಾರ್ ಜನ್ಮ ದಿನಾಚರಣೆ”ಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ರಕ್ತದಾನಿಗಳಿಂದ 145 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಕ್ಲಬ್ ನ ವತಿಯಿಂದ ಲಯನ್ ವೈ.ಎಂ.ಹರ್ಷ ರವರು ರಕ್ತದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ವೈದ್ಯ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.