ತೂಬಗೆರೆಯಲ್ಲಿ ಸಂಭ್ರಮದ ಬಸವಜಯಂತಿ ಆಚರಣೆ

ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.

ವಾದ್ಯ-ಮೇಳದೊಂದಿಗೆ ಆರತಿಗಳನ್ನು ಹಿಡಿದ ಮಹಿಳೆಯರು ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವಣ್ಣನವರಿಗೆ ಗೌರವ ಅರ್ಪಿಸಿದರು.

ನೂರಾರು ಭಕ್ತರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬಸವ ಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜಿಸಿ ಭಕ್ತಿಭಾವ ಮೆರೆದರು.

ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಣೆ ನಡೆಯಿತು.

ವಿಶೇಷ ಪೂಜಾ ಕಾರ್ಯಕ್ರಮಗಳು ನಂತರ ಸಂಜೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಸಲಾಯಿತು. ಮಹಿಳಾ ವೀರಗಾಸೆ ಸೇರಿದಂತೆ ಅನೇಕ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಉದಯ ಆರಾಧ್ಯ,  ಭದ್ರಣ್ಣ, ಸೋಮಣ್ಣ, ಬೇಕರಿ ಬಸವರಾಜ್, ಗಂಗಾಧರಪ್ಪ, ರೇಣುಕಾರಾಧ್ಯ, ಚಂದ್ರು, ಮಹೇಶ್ , ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಗಂಗಾಧರ್, ವೈದ್ಯೆ ಸೌಮ್ಯ, ನಿವೃತ್ತ ಯೋಧ ಗೋಪಾಲ್, ಮುಂತಾದವರಿದ್ದರು.

Leave a Reply

Your email address will not be published. Required fields are marked *