ಕಳೆದ ಶನಿವಾರವಷ್ಟೇ ಸುಂಟಿಕೊಪ್ಪ ಸಮೀಪದ ತೊಂಡೂರು ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಗೊಂಡು ಮೃತಪಟ್ಟಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಮತ್ತೊಂದು ಆನೆ ಇದೇ ರೀತಿಯಲ್ಲಿ ಬಲಿಯಾಗಿದೆ.
ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಐಟಿಸಿ ಎಸ್ಟೇಟ್ ನಲ್ಲಿ ನಿನ್ನೆ ರಾತ್ರಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸಲಗವೊಂದು ಮೃತಪಟ್ಟಿದೆ. ಸ್ಥಳಕ್ಕೆ ಕುಶಾಲನಗರ ಆರ್‌ಎಫ್‌ಓ ರತನ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ದೇವಯ್ಯ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಆನೆಯ ವಯಸ್ಸು 20 ವರ್ಷವೆಂದು ಅಂದಾಜಿಸಲಾಗಿದೆ.