ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ಕನಕೇನಹಳ್ಳಿ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮದಿಂದ ನಡೆಯಿತು.
ಗ್ರಾಮದ ಶಕ್ತಿದೇವತೆಯಾಗಿರುವ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ರಾತ್ರಿ ಊರಿನಲ್ಲಿ ಮೆರವಣಿಗೆ ಮಾಡಲಾಯಿತು. ನಂತರ ಆರತಿ ಬೆಳಗಿ ಗ್ರಾಮಸ್ಥರು ಭಕ್ತಿಯಲ್ಲಿ ಮಿಂದೆದ್ದರು.
ಜಾತ್ರಾ ಮಹೋತ್ಸವ ಹಿನ್ನೆಲೆ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಮಾರಮ್ಮ ದೇವಿಯರಿಗೆ ವಿಶೇಷ ಅಲಂಕಾರ, ಹೋಮ, ಪೂಜೆ ಪುನಸ್ಕಾರ ನಡೆಸಲಾಯಿತು. ದೇವರ ಕೃಪೆಗೆ ಪಾತ್ರರಾಗಲು ನಾನಾ ಊರುಗಳಿಂದ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿದ್ದರು.
ಒಂದು ವಾರ ನಡೆಯುವ ಈ ಜಾತ್ರಾ ಮಹೋತ್ಸವ ಸಾಸಲು ಹೋಬಳಿಯಲ್ಲೇ ಹೆಚ್ಚು ಪ್ರಸಿದ್ಧಿಯಾಗಿದೆ. ಗ್ರಾಮದ ಹಿರಿಯರು, ಯುವಕ ಯುವತಿಯರು ನೃತ್ಯ ಪ್ರದರ್ಶನ ಮಾಡುವ ಮೂಲಕ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು.