ಡಾ.ಕೆ.ಸುಧಾಕರ್ ಭರ್ಜರಿ ಗೆಲುವಿಗೆ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಕೆ.ಸುಧಾಕರ್ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತೂಬಗೆರೆ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲ ಬಿಜೆಪಿ ಕಾರ್ಯದರ್ಶಿ  ಪ್ರತಾಪ್, ನೂತನ ಸಂಸದರಾಗಿ ಆಯ್ಕೆಯಾಗಿರುವ ಸುಧಾಕರ್ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಾ.. ಫಲಿತಾಂಶಕ್ಕಾಗಿ ಹಗಲಿರುಳು ದುಡಿದ ಪಕ್ಷದ ಕಾರ್ಯಕರ್ತರು ಮುಖಂಡರು ಮತ್ತು ಪಕ್ಷದ ಪರವಾಗಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಕೃತಜ್ಞತೆ ತಿಳಿಸಿದರು.

ಮುಂದಿನ ದಿನಗಳಲ್ಲಿ ಹೋಬಳಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶ್ರಮಿಸುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಇದು ಜನರು ನೀಡಿದ ಗೆಲುವು ಎಂದು ಬಣ್ಣಿಸಿದರು.

ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್, ಜೆಡಿಎಸ್ ಮುಖಂಡ ಉದಯ್ ಆರಾಧ್ಯ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಮುನಿಕೃಷ್ಣಪ್ಪ, ಮುಖಂಡರಾದ ಹರೀಶ್, ಕೃಷ್ಣಚಾರಿ, ದೇವರಾಜ್, ಗಂಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *