ಕೋಲಾರ: ಮೀಸಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಬಗ್ಗೆ ಮಾತಾಡುವ ಬರದಲ್ಲಿ ಶಾಸಕರಿಗೆ ಎಂಎಲ್ಸಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವೈಫಲ್ಯ ದರ್ಪ ಅಹಂಕಾರದಿಂದ ಸೋಲಾಗಿದೆ ಎಂದು ಹೇಳುವ ನೈತಿಕತೆ ನಿಮಗೆ ಇಲ್ಲ ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ವಿರುದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಶಾಸಕರಿಗೆ ದರ್ಪ ಮತ್ತು ಅಹಂಕಾರ ಇದ್ದೀದ್ದರೆ ಇಪ್ಪತ್ತು ದಿನದಲ್ಲಿ ಕೋಲಾರಕ್ಕೆ ಬಂದು ಶಾಸಕರಾಗುತ್ತಿರಲಿಲ್ಲ ಕಳೆದ 2023 ರ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುಮಾರು 83ಸಾವಿರ ದಷ್ಟು ಮತಗಳನ್ನು ನೀಡಿ ಕ್ಷೇತ್ರದ ಜನತೆ ಕಾಂಗ್ರೆಸ್ ಪಕ್ಷದ ಶಾಸಕರನ್ನು ಆಯ್ಕೆ ಮಾಡಿದ್ದಾರೆ ಯಾವುದೇ ಸುಳ್ಳು ಆಶ್ವಾಸನೆಗಳನ್ನು ನೀಡಿ ಶಾಸಕರಾಗಿಲ್ಲ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಹ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿಯೇ ಸುಮಾರು ಐದು ಸಾವಿರಕ್ಕೂ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಡಿಸುವಲ್ಲಿ ಶಾಸಕರು ಮತ್ತು ಎಂಎಲ್ಸಿ ಗಳ ಪಾತ್ರ ಬಹುಮುಖ್ಯವಾಗಿದೆ ಮೈತ್ರಿ ಅಭ್ಯರ್ಥಿಯಾಗಿ ನಿಮ್ಮ ಕೊಡುಗೆ ಏನು ಎಂಬುದನ್ನು ಮೊದಲು ವಿಮರ್ಶೆ ಮಾಡಿಕೊಳ್ಳಿ ಅದು ಬಿಟ್ಟು ಕಾಂಗ್ರೆಸ್ ಜನಪ್ರತಿನಿಧಿಗಳ ಬಗ್ಗೆ ಮಾತಾಡಲು ನಿಮಗೆ ನೈತಿಕತೆ ಇಲ್ಲ ಮಾತಾಡಿದಷ್ಟು ನಿಮ್ಮ ಗೌರವವನ್ನು ನೀವೇ ಕಳೆದುಕೊಳ್ಳಬೇಕಾಗುತ್ತದೆ ಎಂದರು.
ಸಿಎಂಆರ್ ಶ್ರೀನಾಥ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯಾಗಲಿದ್ದಾರೆ ಎಂಬುದನ್ನು ನಿಮ್ಮದೇ ಪಕ್ಷದ ಕಾರ್ಯಕರ್ತರಿಗೆ ಗೊಂದಲವಾಗಿದೆ ಕೇವಲ ಇಪ್ಪತ್ತು ದಿನಗಳಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದು ತೋರಿಸಿದವರಿಗೆ ನಿಮ್ಮ ಸಲಹೆ ಸೂಚನೆಗಳು ಅವಶ್ಯಕತೆ ಇಲ್ಲ ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಮಾಡಲು ಶಾಸಕರು ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಅವರು ಪಣ ತೊಟ್ಟಿದ್ದಾರೆ ಸಾರ್ವಜನಿಕ ಜೀವನದಲ್ಲಿ ಯಾರ ಬಗ್ಗೆಯೂ ಹಗುರವಾಗಿ ಮಾತನಾಡಬಾರದು ಎಂದು ಕಿವಿ ಮಾತು ಹೇಳಿದರು
ಈ ಬಾರಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ದೇಶದ ಚುನಾವಣೆ ಅದರಲ್ಲೂ ವಿಶೇಷವಾಗಿ ನರೇಂದ್ರ ಮೋದಿ ಮತ್ತು ನಿಮ್ಮದೇ ಪಕ್ಷದ ರಾಜ್ಯ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರ ಮುಖ ನೋಡಿ ಜೊತೆಗೆ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ ಅಂತ ಅನುಕಂಪದಿಂದ ಮತ ಹಾಕಿದ್ದಾರೆ ಹೊರತು ನಿಮ್ಮ ಮೈತ್ರಿ ಅಭ್ಯರ್ಥಿ ಅಥವಾ ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ಮುಖ ನೋಡಿ ಯಾರು ಮತ ಹಾಕಿಲ್ಲ ಕಳೆದ ಬಾರಿಗಿಂತ ಸುಮಾರು ೧.೫೦ ದಷ್ಟು ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆದಿದ್ದಾರೆ ಕಳೆದ ಬಾರಿಯ ನಿಮ್ಮ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳಬೇಕಾದ ನೀವು ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳಲು ಹೊರಟಿದ್ದು ವಿಪರ್ಯಾಸವಾಗಿದೆ ಎಂದರು.
ರಾಜ್ಯದಲ್ಲಿ ಕಳೆದ ಬಾರಿ ಜೆಡಿಎಸ್ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡು ಕೇವಲ ಒಂದು ಸ್ಥಾನವನ್ನು ಪಡೆದಿದ್ದೇವೆ ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಿ ಒಂಭತ್ತು ಸ್ಥಾನಗಳನ್ನು ಗಳಿಸಿದ್ದೇವೆ ಇದು ರಾಜ್ಯದ ಕಾಂಗ್ರೆಸ್ ಸರಕಾರದ ಬಗ್ಗೆ ಮತದಾರಿಗೆ ಇರುವ ಒಲವು ಎನು ಎಂಬುದನ್ನು ತೋರಿಸುತ್ತದೆ ದೇಶದಲ್ಲಿ ಕೂಡ ಬಿಜೆಪಿ ಬಗ್ಗೆ ಮತದಾರರ ಒಲವು ಇಲ್ಲ ಎಂಬುದನ್ನು ಚುನಾವಣೆಯಲ್ಲಿ ನಿರೂಪಿಸಿದ್ದಾರೆ ಯಾರೇ ಆಗಲಿ ಯಾರನ್ನೇ ಆಗಲಿ ಮಾತಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಸಿಎಂಆರ್ ಶ್ರೀನಾಥ್ ಅವರಿಗೆ ಮೈಲಾಂಡಹಳ್ಳಿ ಮುರಳಿ ಎಚ್ಚರಿಕೆ ನೀಡಿದರು