ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಕಾರ್ಯವಿಧಾನ ಬಗ್ಗೆ ಮಾಹಿತಿ

ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇವಿಎಂ ಮತಯಂತ್ರಗಳ ಕಾರ್ಯವಿಧಾನಗಳ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ ನೀಡಿದರು.

ಬೀರಸಂದ್ರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು, ವಿದ್ಯುನ್ಮಾನ ಮತ ಯಂತ್ರಗಳ(ಇವಿಎಂ) ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್ ಹಾಗೂ ವಿವಿಪ್ಯಾಟ್ ಯಂತ್ರಗಳ ಕಾರ್ಯವಿಧಾನಗಳು ಹಾಗೂ ಅವುಗಳ ಪಾರದರ್ಶಕತೆ , ಚಲಾವಣೆಗೊಂಡ ಮತ ನಿರ್ದಿಷ್ಟ ಅಭ್ಯರ್ಥಿಗೆ ಹೋಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳುವ ವಿಧಾನಗಳ ಮಾಹಿತಿಯನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅಣಕು ಮತದಾನ ಮಾಡಿ, ವಿವಿಪ್ಯಾಟ್ ಯಂತ್ರದಲ್ಲಿ ಮತದಾನದ ದಾಖಲಾತಿ ಖಚಿತಪಡಿಸಿಕೊಂಡರು.

ಈ ವೇಳೆ ಉಪವಿಭಾಗಾಧಿಕಾರಿ ತೇಜಸ್ ಕುಮಾರ, ದೇವನಹಳ್ಳಿ ತಹಸೀಲ್ದಾರ್ ಶಿವರಾಜ ಸೇರಿದಂತೆ ಚುನಾವಣಾ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *