ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ಹಳ್ಳಿ ರೈತ ಅಂಬರೀಶ್ ಸಂತ್ವಾನ ಹೇಳಿದರು.
ರೇಣುಕಾಸ್ವಾಮಿ ಕೊಲೆ ಅಮಾನವೀಯ ಕೃತ್ಯವಾಗಿದೆ. ಈ ಪ್ರಕರಣವನ್ನು ಎಲ್ಲರೂ ಖಂಡಿಸಬೇಕಾದ ಅಗತ್ಯವಿದೆ. ಇತ್ತೀಚೆಗೆ ಇಂಥ ಘಟನೆಗಳು ಬಹಳ ಕಡೆ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಯಾವುದೇ ಪಕ್ಷದ ಸರ್ಕಾರವಿರಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಈ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ ಮೆಚ್ಚುಗೆಗೆ ಪಾತ್ರವಾಗಿದೆ. ಆದರೇನು ಮಾಡುವುದು ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಪತ್ನಿ, ಪೋಷಕರು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರದಿಂದ ನೆರವು ಮಾತ್ರವಲ್ಲ, ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು. ಎಂದು ಹಳ್ಳಿ ರೈತ ಅಂಬರೀಶ್ ಅವರು ಸರ್ಕಾರಕ್ಕೆ ಒತ್ತಾಯಿಸಿದರು.