ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಪಾಪರ್ ಸರ್ಕಾರದ ಜೇಬು ತುಂಬಿಸಿಕೊಳ್ಳಲು ಬಸ್ ದರ ಏರಿಕೆ ಮಾಡುವ ಮುನ್ನ.. ಸಾರಿಗೆ ವ್ಯವಸ್ಥೆಯಲ್ಲಿ ಆಗುತ್ತಿರುವ ಎಡವಟ್ಟುಗಳನ್ನು ಸರಿಮಾಡಿ. ವಿದ್ಯಾರ್ಥಿಗಳ ಪರದಾಟಕ್ಕೆ ಮುಕ್ತಿ ನೀಡಿ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ, ಬೆಂಗಳೂರಿನಿಂದ ದೊಡ್ಡಬಳ್ಳಾಪುರ ನಗರಕ್ಕೆ ಆಫೀಸ್, ಶಾಲಾ-ಕಾಲೇಜುಗಳು, ಆಸ್ಪತ್ರೆ, ಕೋರ್ಟ್-ಕಚೇರಿ ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗದೇ ಪರದಾಡುವಂತಾಗಿದೆ. ಈ ಹಿನ್ನೆಲೆ ಹೆಚ್ಚುವರಿ ಬಸ್ ಗಳನ್ನ ನೀಡಿ ಎಂದು ಹಲವು ಬಾರಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಹೆಚ್ಚುವರಿ ಬಸ್ ಗಳನ್ನ ನೀಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಇಂದು ಬೆಳಗ್ಗೆ ಪ್ರಯಾಣಿಕರು ನಗರದ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದರು.
ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದವು. ಈ ಆಧಾರದ ಮೇಲೆ ಸರ್ಕಾರವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.