ಕೋಲಾರ: ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕರೆಗಳಿಗೆ ಕೆ.ಸಿ.ವ್ಯಾಲಿ ನೀರು ತುಂಬಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಕುರಿತು ಬೆಂಗಳೂರಿನಲ್ಲಿ ಮಂಗಳವಾರ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮತ್ತು ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಜಿಲ್ಲೆಯ ಶಾಸಕರಾದ ಕೊತ್ತೂರು ಜಿ ಮಂಜುನಾಥ್, ಕೆ.ವೈ.ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ಸಮೃದ್ದಿ ಮಂಜುನಾಥ, ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್, ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮ್ ಮನೋಹರ ಪ್ರಸಾದ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್, ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಸಣ್ಣ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರ ರಾಘವನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು