ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು- ಜೆ. ರಾಜೇಂದ್ರ

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ವಿದ್ಯಾರ್ಥಿಯಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ಹೇಳಿದರು.

ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2023-24 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ ಇದು, ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು, ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ನಿಷ್ಠೆ ಮತ್ತು ನೈತಿಕ ಮೌಲ್ಯ ಇರಬೇಕು, ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು, ನಮ್ಮ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು ಎಂದು ಹೇಳಿದರು.

ಲಯನ್ ಶ್ರೀನಿವಾಸ್ ಮಾತನಾಡಿ, ಪ್ರತಿಭಾ ಪುರಸ್ಕಾರಗಳು, ಸನ್ಮಾನಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಇತರೆ, ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಸಾಧನೆಯ ಹಾದಿ ಸುಗಮವಲ್ಲ ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಲು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲ ಮಾಂತೇಶಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಆರ್ ನಾಗರಾಜು, ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ, ಅಂತರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲ ಧನಂಜಯ್, ಅಂತರಾಷ್ಟ್ರೀಯ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಜಿಯಾವುಲ್ಲಾ, ಐ.ಟಿ.ಐ ಕಾಲೇಜಿನ ಪ್ರಾಂಶುಪಾಲ ರವಿ, ವಾಣಿಜ್ಯ ವಿಭಾಗದ ಸಂಯೋಜಕ ಜೆ.ವಿ ಚಂದ್ರಶೇಖರ್, ವಿಜ್ಞಾನ ವಿಭಾಗದ ಸಂಯೋಜಕ ಖಾದರ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *