ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕೋರಿ HMIS ಪೋರ್ಟಲ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕೋರಿ HMIS ಪೋರ್ಟಲ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು HMIS ಪೋರ್ಟಲ್ನಲ್ಲಿ ಅರ್ಜಿಗಳನ್ನು ಸಲ್ಲಿಸುವುದು. ಒಂದುವೇಳೆ HMIS ಪೋರ್ಟಲ್ ನಲ್ಲಿ ಅರ್ಜಿಸಲ್ಲಿಸಲು ಅನಾನುಕೂಲವಾಗುವ ವಿದ್ಯಾರ್ಥಿಗಳು ಅರ್ಜಿಯನ್ನು Manual ಮುಖೇನ ಪ್ರವೇಶ ಪಡೆಯಲು ಹತ್ತಿರವಿರುವ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳನ್ನು ಭೇಟಿಯಾಗಿ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ, ಜಿಲ್ಲಾಡಳಿತ ಭವನ. ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂ.ಗ್ರಾ. ಜಿಲ್ಲೆ-562110. ದೂ.ಸಂ-080-129787447. ಸಹಾಯಕ ನಿರ್ದೇಶಕರ ಕಚೇರಿ : ದೇವನಹಳ್ಳಿ ತಾಲ್ಲೂಕು .080-127681784. ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ-080-27623681. ಹೊಸಕೋಟೆ ತಾಲ್ಲೂಕು ದೂ.ಸಂ-080-27931528. ನೆಲಮಂಗಲ ತಾಲ್ಲೂಕು ದೂ.ಸಂ-080-27723172. ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *