ವಾಲ್ಮೀಕಿ, ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯ

ಕೋಲಾರ: ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತಂತೆ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಜೆಡಿಯು ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ ಕೆ.ನಾಗರಾಜ್ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಈಗಾಗಲೇ ತನಿಖೆ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದ್ದಾರೆ‌‌. ಸಿದ್ದರಾಮಯ್ಯ ಗಮನಕ್ಕೆ ಬಾರದೆ ಹಗರಣ ನಡೆದಿರುವುದಿಲ್ಲ. ಪ್ರಕರಣದ ಸತ್ಯ ಸತ್ಯತೆ ಹೊರಬರಬೇಕಾದರೆ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಭ್ರಷ್ಟಾಚಾರವು ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಹಾಗೂ ಹೊರ ರಾಜ್ಯಗಳ ಚುನಾವಣೆಗಳಲ್ಲಿ ಹಣ ಖರ್ಚು ಮಾಡುವ ಉದ್ದೇಶದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಡವರ ದಲಿತರ ಅಭಿವೃದ್ಧಿಗಾಗಿ ಇದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಮತ್ತು ಮೈಸೂರಿನ ಮುಡಾ ಹಗರಣದಲ್ಲಿ ತಪ್ಪು ನಡೆದಿಲ್ಲದೇ ಹೋದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಆರೋಪ ಎದುರಿಸುತ್ತಿರುವವರು ಆರೋಪದಿಂದ ಮುಕ್ತರಾಗಿ ಬರಲಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ವಿರೋಧ ಪಕ್ಷಗಳು ಕೂಡ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ರಾಜ್ಯದ ದೊಡ್ಡ ಹಗರಣವಾಗಿರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೋಚಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಬಂಡವಾಳ ಬಯಲಾಗಿದೆ ಎಂದು ಆರೋಪಿಸಿದರು.

ಇನ್ನೂ ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ಹಗರಣದಿಂದ ಬಡವರಿಗೆ ದಲಿತರಿಗೆ ದೊರೆಯುವ ಸೌಲಭ್ಯದ ಹಣ ದುರ್ಬಳಕೆ ಮಾಡಿಕೊಂಡಿದ್ದರಿಂದ ಸರಕಾರ ಕೂಡಲೇ ನಿಗಮಕ್ಕೆ ಸಿಗಬೇಕಾದ ಹಣವನ್ನು ಕೂಡಲೇ ನೀಡಬೇಕು. ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿರುವ ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಯಾರೆಲ್ಲ ಈ ಪ್ರಕರಣದಲ್ಲಿ ಇದ್ದಾರೆ ಅವರೆಲ್ಲರಿಗೂ ಶಿಕ್ಷೆ ಆಗಬೇಕು ಎಂದು ಕಲ್ಲಂಡೂರು ಡಾ.ಕೆ ನಾಗರಾಜ್ ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!