ವಿದ್ಯಾರ್ಥಿಗಳಿಗೆ ಶಿಸ್ತು ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್  ಗೆ ಸೇರಿಸಿ: ಪಿಜಿಆರ್ ಸಿಂಧ್ಯಾ

ಕೋಲಾರ: ವಿದ್ಯಾರ್ಥಿಗಳಿಗೆ ಬದುಕಿನ ಕಲೆ ಕಲ್ಪಿಸುವ ಜೊತೆಗೆ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಶಿಸ್ತು ಮತ್ತು ಕೌಶಲ್ಯವು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯ ರಾಜ್ಯ ಆಯುಕ್ತ ಪಿಜಿಆರ್‌.ಸಿಂಧ್ಯಾ ತಿಳಿಸಿದರು

ನಗರದ ಮಹಿಳಾ ಸಮಾಜ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಾಲೂಕು ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಎಲ್ಲಾ ಹಂತದ ವಿದ್ಯೆಯನ್ನು ಕಲಿಸುತ್ತದೆ ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸದೇ ಎಲ್ಲಾ ವರ್ಗವನ್ನು ಈ ಸಂಸ್ಥೆಯೂ ಪ್ರತಿನಿಧಿಸುತ್ತದೆ. ಸತ್ಯದ ನಂಬಿಕೆಯನ್ನು ಹೊಂದುವಂತೆ ವಿಧ್ಯಾರ್ಥಿಗಳಿಗೆ ಮೂಡಿಸುತ್ತದೆ ಮಕ್ಕಳ ಮಧ್ಯೆ ಸಮನ್ವಯತೆಯಿಂದ ಬದುಕುವ ವಾತಾವರಣವನ್ನು ಸೃಷ್ಟಿಸುತ್ತದೆ ಅದರಿಂದಾಗಿ ಪ್ರತಿಯೊಬ್ಬರೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರಿಸುವಂತೆ ಮಾಡಬೇಕು ಎಂದರು.

ದೇಶದಲ್ಲಿ ಸುಮಾರು ಒಂದು ಕೋಟಿಯಷ್ಟು ವಿಧ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕೆಲಸ ಮಾಡುತ್ತಿದ್ದು ಉಳಿದ 39 ಕೋಟಿ ವಿಧ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡಬೇಕಾಗಿದೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಇದಕ್ಕೆ ಪ್ರತಿಯೊಂದು ವಿದ್ಯಾಸಂಸ್ಥೆಯ ಸಹಕಾರ ಮುಖ್ಯವಾಗಿದೆ ಈ ಬಾರಿ ರಾಜ್ಯದಲ್ಲಿ 10 ಲಕ್ಷದಷ್ಟು ವಿಧ್ಯಾರ್ಥಿಗಳನ್ನು ಹೊಸ ಸೇರ್ಪಡೆ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೈಡ್ಸ್ ಸಂಸ್ಥೆಯ ನೂತನ ಜಿಲ್ಲಾ ಆಯುಕ್ತರು ಹಾಗೂ ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಂ ನವೀನಾ ಮಾತನಾಡಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತದೆ ಪರಿಸರ ಉಳಿಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ತುಂಬಬೇಕು. ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನೂ ಮಕ್ಕಳಲ್ಲಿ ಮೂಡಿಸುತ್ತದೆ ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸಯ ಸ್ಕೌಟ್ಸ್‌ ಮತ್ತು ಗೈಡ್ಸ್‌ನಿಂದಾಗುತ್ತದೆ ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಕೆ.ವಿ ಶಂಕರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ ನಂದನಾ, ಸಂಸ್ಥೆಯ ಪಿ.ಆರ್.ಒ ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಸುರೇಶ್, ಚಲ್ಲಯ್ಯ, ಇಂಚರ ನಾರಾಯಣಸ್ವಾಮಿ, ಸ್ಕೌಟ್ಸ್ ಬಾಬು, ರಾಮಚಂದ್ರ, ಉಮಾ, ಸಂಪತ್, ಸೋಮಶೇಖರ್, ನಾರಾಯಣಸ್ವಾಮಿ ಮುಂತಾದವರು ಇದ್ದರು

Leave a Reply

Your email address will not be published. Required fields are marked *

error: Content is protected !!