ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಗುಂಡಪ್ಪನಾಯಕನಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಗುಂಡಪ್ಪನಾಯಕನಹಳ್ಳಿ ಗ್ರಾಮದ ರೈತ ದೇವರಾಜ್ ಗೆ ಸೇರಿದ ಮೇಕೆ ಚಿರತೆಗೆ ಬಲಿಯಾಗಿದೆ.
ಎಂದಿನಂತೆ ಮೇಕೆಗಳನ್ನು ಮೇಯಿಸಲು ಗ್ರಾಮದ ಹೊರವಲಯದಲ್ಲಿರುವ ಕಾಡಿಗೆ ಹೋಗಿದ್ದಾರೆ. ಈ ವೇಳೆ ಮೇಕೆಗಳ ಮೇಲೆ ಏಕಾಏಕಿ ಎರಗಿ ಬಲಿಪಡಿದಿದೆ.
ಕೂಡಲೇ ಚಿರತೆಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.