ಕೇಂದ್ರ ಬಜೆಟ್: ಅನ್ನದಾತ, ಬಡವ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ- ರೈತ ಮುಖಂಡ ಅಂಬರೀಶ್

ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25 ರಲ್ಲಿ ಅನ್ನದಾತ, ಬಡವ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್ ಎಸ್ ಎಮ್ ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ ಎಂದು ಹಳ್ಳಿ ರೈತ ಅಂಬರೀಶ್ ತಿಳಿಸಿದರು.

2024-25ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದರು.

ದೇಶದ ಅರ್ಥ ವ್ಯವಸ್ಥೆಗೆ ಶರವೇಗ ನೀಡುವ ನಿಟ್ಟಿನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಹಣದುಬ್ಬರವನ್ನು ನಿಯಂತ್ರಿಸಲಿದ್ದು ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ ಮೀಸಲಿರಿಸಿ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ ಅನುದಾನ ನೀಡುವ ಮೂಲಕ ರೈತರ ಏಳಿಗೆಗೆ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿರುವುದು ರೈತರು ಹಾಗೂ ಸ್ತ್ರೀ ಕುಲದ ಬಗೆಗಿನ ಅದಮ್ಯ ವಿಶ್ವಾಸವನ್ನು ಸಂಕೇತಿಸಿದೆ ಎಂದು ತಿಳಿಸಿದರು.

ಆದರೆ,  ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮಣೆ ಹಾಕುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಯತ್ನ ಮಾಡಲಾಗಿದೆ ಅಷ್ಟೆ. ಕರ್ನಾಟಕಕ್ಕೆ ಎಂದಿನಂತೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತೋರುವುದನ್ನು ಮುಂದುವರಿಸಿದೆ. ರಾಜ್ಯದಲ್ಲಿ ಬಾಕಿ ಇರುವ ಯಾವುದೇ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!