ಆಗಸ್ಟ್ 2 ರಂದು ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೆಳಿಗ್ಗೆ 5 ಗಂಟೆಗೆ ಮಹಿಳೆ ಬೆಳಗಿನ ವಾಕಿಂಗ್ಗೆ ಹೊರಟಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮಹಿಳೆ ಒಬ್ಬೊಂಟಿಯಾಗಿ ವಾಕಿಂಗ್ ಮಾಡುತ್ತಿದ್ದ ವೇಳೆ ಒಬ್ಬ ವ್ಯಕ್ತಿ ಹಿಂದಿನಿಂದ ಬಂದು ಕಿರುಕುಳ ನೀಡಿದ್ದಾನೆ. ಮಹಿಳೆ ಆ ಕಿರಾತಕನಿಂದ ತಪ್ಪಿಸಿಕೊಳ್ಳಲು ಜೋರಾಗಿ ಕೂಗಿಕೊಂಡಾಗ ಪಕ್ಕಕ್ಕೆ ನೂಕಿ ಅಲ್ಲಿಂದ ಪರಾರಿಯಾಗುತ್ತಾನೆ.
ಸದ್ಯ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆಯ ಕುಟುಂಬ ಮೂಲತಃ ರಾಜಸ್ಥಾನದವರಾಗಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಆಕೆಯ ಪತಿ ಪೊಲೀಸ್ ದೂರು ದಾಖಲಿಸಿದ್ದಾರೆ.