ಸ್ಕೂಟರ್ ಗೆ ಲಾರಿ ಡಿಕ್ಕಿ- ತುಂಬು ಗರ್ಭಿಣಿ ಸ್ಥಳದಲ್ಲೇ ಸಾವು

ಸ್ಕೂಟರ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ತುಂಬು ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ತಾಯಿಯ ಹೊಟ್ಟೆಯಿಂದ ಹೊರ ಬಂದ ಮಗು ಕೂಡ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಎಡೇಹಳ್ಳಿ ಗೇಟ್ ಬಳಿ ನಡೆದಿದೆ.

ಘಟನೆಯಲ್ಲಿ ತುಂಬು ಗರ್ಭಿಣಿ ಮಹಿಳೆ ಸಿಂಚನ (3೦) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಲಾರಿ ಮತ್ತು ಬಸ್ ಚಾಲಕ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಗ್ವಾದ ನಡೆಯುತ್ತಿದ್ದು, ಮೃತ ಮಹಿಳೆಯ ಗಂಡ ಮಂಜುನಾಥ್ ಸರ್ವಿಸ್ ರಸ್ತೆಯಲ್ಲಿ ಹೋಗಿದ್ದಾರೆ, ಈ ವೇಳೆ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಡ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ನೆಲಮಂಗಲ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತ ಸಿಂಚನಾ ಅವರಿಗೆ ಆಗಸ್ಟ್ 17 ಕ್ಕೆ 8 ತಿಂಗಳು ತುಂಬಿ 9 ತಿಂಗಳು ಆಗುತ್ತಿತ್ತು, ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ಶಿವಗಂಗೆಯ ಗಣಪತಿ ದೇವಾಲಯಕ್ಕೆ ತೆರಳಿದ ದಂಪತಿ ಪೂಜೆ ಸಲ್ಲಿಸಿ ಮನೆಗೆ ವಾಪಸ್ ಬರುವ ವೇಳೆ ಘೋರ ದುರಂತವಾಗಿದೆ.

ಗಂಡನ ಎದುರೇ ತುಂಬು ಗರ್ಭಿಣಿ ಸಾವನ್ನಪ್ಪಿದ್ದು, ಗಂಡನ ಗೋಳಾಟದ ದೃಶ್ಯ ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.

Leave a Reply

Your email address will not be published. Required fields are marked *

error: Content is protected !!