ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಗ್ರಾಮದ ಕಟ್ಟಡ ಕಾರ್ಮಿಕರಾದ ಲಕ್ಷ್ಮೀ ಅವರಿಗೆ ಕಲ್ಯಾಣ ಮಂಡಳಿಯಿಂದ ನೀಡುವ 30 ಸಾವಿರದ ಹರಿಗೆ ಬಾಂಡ್ ಅನ್ನು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಕಾಶ್ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಕಟ್ಟಡ ಕಾರ್ಮಿಕರು ಹಾಗೂ ಇತರೆ ವೃತ್ತಿಯನ್ನು ಮಾಡುವ ಕಾರ್ಮಿಕರಿಗೆ ಇಲಾಖೆಯಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಸಂಘದಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಯಾವುದೇ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದರೆ, ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು,
ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಕಾರ್ಮಿಕರನ್ನು ಗುರುತಿಸಿ ನೋಂದಣಿಗೆ ಅರ್ಜಿಗಳನ್ನು ಪಡೆಯಲಾಗುತ್ತದೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದರೆ ಅಂತಹ ಫಲಾನುಭವಿಗಳಿಗೆ ಮಂಡಳಿಯಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯ, ವಸತಿ ಸೌಲಭ್ಯ, ಹೆರಿಗೆ ಸೌಲಭ್ಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಸೌಲಭ್ಯ ಶೈಕ್ಷಣಿಕ ಸಹಾಯಧನ ಸೇರಿದಂತೆ 19 ರೀತಿಯ ವಿವಿಧ ಸೌಲಭ್ಯಗಳು ಸಿಗುತ್ತದೆ ಸಂಘದಿಂದಲ್ಲೂ ನೋಂದಣಿ ಮಾಡಿಸಲಾಗುವುದು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಸುರೇಶ್ ಇದ್ದರು.