ತೂಬಗೆರೆಯಲ್ಲಿ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆ

ತೂಬಗೆರೆ ಸರ್ಕಾರಿ ಕಾಲೇಜು ಹಾಗೂ ವಿವಿಧ ಶಾಲೆ ಮತ್ತು ಕಚೇರಿಗಳಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಲಾಯಿತು.

ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂಜಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ  ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಅರವಿಂದ್, ಕೆಪಿಸಿಸಿ ಸದಸ್ಯ ಮುನಿರಾಜು, ಹೋಬಳಿ ಹಿತರಕ್ಷಣ ಸಮಿತಿ ಅಧ್ಯಕ್ಷರಾದ ರವಿ ಸಿದ್ದಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟೇಶ್,  ಹಿರಿಯ ಸದಸ್ಯರಾದ ಮುನಿಕೃಷ್ಣಪ್ಪ, ಕೃಷ್ಣಪ್ಪ ಮುಂತಾದವರು ಭಾಗಿಯಾಗಿದ್ದರು.

ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸತ್ಯನಾರಾಯಣಪ್ಪ ಮಾತನಾಡಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಕಡಿಮೆ ಮಾಡಿ ,ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

ಶಾಲೆಯ 2008ನೇ ಬ್ಯಾಚಿನ ಹಳೆ ವಿದ್ಯಾರ್ಥಿಗಳು ಕಳೆದ ವರ್ಷ ಶಾಲಾ ಮಟ್ಟದಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿದರು.

ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಕ್ಕಳ ವೇಷಭೂಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಲಾ ಮತ್ತು ಕಾಲೇಜು ಮಕ್ಕಳು ಬ್ಯಾಂಡ್ಸೆಟ್ ವಾದ್ಯದೊಂದಿಗೆ ಮೆರವಣಿಗೆ ನಡೆಸಿದರು.

ಇದೆ ಸಂದರ್ಭದಲ್ಲಿ ಮಕ್ಕಳಿಗೆ ಬಸ್ ನಿಲ್ದಾಣದಲ್ಲಿ ಗ್ರಾಮಸ್ಥರು ಸಿಹಿತಿಂಡಿ ವಿತರಿಸಿದರು.

ಉಳಿದಂತೆ ಸರ್ಕಾರಿ ಆರೋಗ್ಯ ಕೇಂದ್ರ, ನಾಡಕಚೇರಿ, ಪಶು ಆರೋಗ್ಯ ಕೇಂದ್ರ, ಹಾಲು ಉತ್ಪಾದಕ ಸಹಕಾರ ಸಂಘ, ತೂಬಗೆರೆ ವ್ಯವಸಾಯೋತ್ಪನ್ನ ಸಹಕಾರ ಸಂಘ ಸೇರಿದಂತೆ ವಿವಿಧ ಕಚೇರಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!