ಪತ್ರಕರ್ತರಿಂದ ಇನ್ನಷ್ಟು ಸಮಾಜಮುಖಿ ಕೆಲಸಗಳಾಗಲಿ-ವೈದ್ಯಾಧಿಕಾರಿ ಡಾ.ರಮೇಶ್

ದೊಡ್ಡಬಳ್ಳಾಪುರ : ಪತ್ರಕರ್ತರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಶ್ಲಾಘನೀಯ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.

78ನೇ ಸ್ವಾತಂತ್ರ್ಯ ದಿನಧ ಅಂಗವಾಗಿ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪತ್ರಕರ್ತರು ಲೇಖನ, ಸುದ್ದಿ ಮಾಡುವುದರಲ್ಲಿ ತೊಡಗಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುತ್ತಾರೆ, ಈ ಮಧ್ಯೆ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮಾಡುವ ಮೂಲಕ ಸ್ವಾತಂತ್ರ್ಯ ದಿನ ಆಚರಣೆ ಮಾಡಿದ್ದು ಅಭಿನಂದನೀಯ, ನಿಮ್ಮ ಮೂಲಕ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಮೂಳೆ ತಜ್ಞರಾದ ಮಂಜುನಾಥ್, ಡಾ.ಪರಮೇಶ್ವರ್ ಡಾ.ವೈಶಾಕ್ ಗೌಡ, ಕಚೇರಿ ಸಿಬ್ಬಂದಿ ಶ್ರೀನಿವಾಸ್ ಮೂರ್ತಿ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ದೇವರಾಜ್, ಜಿಲ್ಲಾಧ್ಯಕ್ಷ ಎಚ್ಎಸ್ ಅಗ್ನಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ಉಪಾಧ್ಯಕ್ಷರಾದ ಆನಂದ್ ಕುಮಾರ್, ತಾಲೂಕು ಅಧ್ಯಕ್ಷ ರಾಜು ಸಣ್ಣಕ್ಕಿ, ತಾಲೂಕು ಉಪಾಧ್ಯಕ್ಷ ಡಿಸಿ ಚೌಡರಾಜ್ ಪ್ರಧಾನ ಕಾರ್ಯದರ್ಶಿ ಜನಪರ ಮಂಜುನಾಥ, ಖಜಾಂಚಿ ಹರಿಕುಮಾರ್, ನಿರ್ದೇಶಕರಾದ ಶಿವಕುಮಾರ್, ಉಮೇಶ್, ಜಯರಾಮಪ್ಪ, ಜಿಲ್ಲಾ ಸಮಿತಿ ಸದಸ್ಯ ಗೋಪಾಲಪ್ಪ, ಪ್ರಜಾ ವಿಮೋಚನ ಬಹುಜನ ಸಮಿತಿ ನಗರಾಧ್ಯಕ್ಷ ಮುತ್ತೂರು ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಲಕ್ಷ್ಮೀ ಶ್ರೀನಿವಾಸ್, ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!