‘ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯಿಲ್ಲ’-ಕೊಮ್ಮನಹಳ್ಳಿ ಆನಂದ್ ವಾಗ್ದಾಳಿ

ಕೋಲಾರ: ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯಿಲ್ಲ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು.

ತಾಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಬುಧವಾರ ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲೂಕು ಕಾರ್ಯಕಾರಣಿ ಸಭೆಯಲ್ಲಿ ಗೋಪೂಜೆ ಸಲ್ಲಿಸಿ ಮಾತನಾಡಿದ ಅವರು. ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಆದರೂ, ಸಿದ್ದರಾಮಯ್ಯ ನಲವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಕಾಂಗ್ರೆಸ್ ಶಾಸಕರು ಅವರ ಬೆಂಬಲಿಗರು ಸ್ವಯಂ ಸರ್ಟಿಫಿಕೇಟ್ ಕೊಡಲು ಹೊರಟಿದ್ದಾರೆ. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ವಿಚಾರವನ್ನು ರಾಜಕೀಯ ದಾಳವಾಗಿ ಬಳಸಿಕೊಂಡು ಅಧಿಕಾರದಲ್ಲಿ ಮುಂದುವರಿಯಲು ಪ್ರಯತ್ನಿಸುತ್ತಿರುವುದು ಸರಿಯಲ್ಲ. ಪ್ರಕರಣಗಳ ಆರೋಪವಿದ್ದರೂ ಅಧಿಕಾರದಲ್ಲಿ ಮುಂದುವರಿಯಲು ಯತ್ನಿಸುವುದು ಸಂವಿಧಾನಕ್ಕೆ ಮಾಡುವ ಅಗೌರವಾಗಿದೆ. ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ರೈತ ಬಜೆಟ್ ಮಂಡಿಸಿದ್ದರು ಆದರೆ ಕಾಂಗ್ರೆಸ್ ಸರ್ಕಾರವು ರೈತರ ಬಗ್ಗೆ ಗಮನಹರಿಸುತ್ತಿಲ್ಲ ರಾಜ್ಯದಲ್ಲಿ ಖಜಾನೆ ಸಂಪೂರ್ಣವಾಗಿ ಖಾಲಿ ಮಾಡಿ ದಿವಾಳಿ ಮಾಡಿದ್ದಾರೆ ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಬೆಳೆಗೆ ಬೆಂಬಲ ಬೆಲೆ ಜಾಸ್ತಿ ಮಾಡಿ ಪರಿಹಾರವು ನೀಡಿದೆ ರಾಜ್ಯ ಸರ್ಕಾರ ಮಾತ್ರ ರೈತರಿಗೆ ದ್ರೋಹ ಮಾಡಿದೆ ಈ ಸರ್ಕಾರದ ವಿರುದ್ದ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಮುಂದಾಗಬೇಕು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ರಾಜ್ಯಪಾಲರನ್ನು ಬಾಂಗ್ಲಾ ದೇಶದ ಮಾದರಿಯಲ್ಲಿ ರಾಜ್ಯದಿಂದ ಓಡಿಸುತ್ತೇವೆ ಎಂಬ ಹೇಳಿಕೆ ನೀಡಿರುವ ಎಂಎಲ್ಸಿ ಐವನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಕೆಲವು ಕಡೆಯಲ್ಲಿ ಕಾಂಗ್ರೆಸ್ ನಾಯಕರು ನಾಲಿಗೆಯ ಮೇಲೆ ಹಿಡಿತ ಇಲ್ಲದೆ ಮಾತನಾಡಿದ್ದಾರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ತಾಲೂಕು ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಕೆ. ಚಂದ್ರಶೇಖರಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್, ಮಂಜುನಾಥ್, ಉಪಾಧ್ಯಕ್ಷರಾಗಿ ಮುರಳಿ, ಶ್ರೀಧರ್ ಬಾಬು,ವೆಂಕಟೇಶ್, ಶ್ರೀನಿವಾಸಚಾರಿ, ಗೋಪಾಲಪ್ಪ ಕಾರ್ಯದರ್ಶಿಗಳಾಗಿ ಜಗದೀಶ್, ಶಶಿಕುಮಾರ್, ಶ್ರೀನಾಥ್, ಬೈರೇಗೌಡ ಮಂಜುನಾಥ್ ಬೈರೇಷ್ ಸೇರಿದಂತೆ ಸಮಿತಿ ಸದಸ್ಯರನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿಜೆಪಿ ಶಿವಣ್ಣ, ಹುಣಸೀಕೋಟೆ ಶ್ರೀನಿವಾಸ್, ಜಿಲ್ಲಾ ಉಪಾಧ್ಯಕ್ಷರಾದ ಡಾ.ಆರ್ ನಾರಾಯಣಸ್ವಾಮಿ, ಸತೀಶ್ ಗೌಡ, ಗೋಪಸಂದ್ರ ನಾರಾಯಣಸ್ವಾಮಿ, ಜಿಲ್ಲಾ ಖಜಾಂಚಿ ವೆಂಕಟೇಶ್, ಮುಖಂಡರಾದ ಓಹಿಲೇಶ್, ಮುನಿಸ್ವಾಮಿ ಮುಂತಾದವರು ಇದ್ದರು.

Leave a Reply

Your email address will not be published. Required fields are marked *

error: Content is protected !!