ಗೌರಿ -ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬ: ವಿವಿಧ ಠಾಣೆಗಳ ವ್ಯಾಪ್ತಿಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ರೂಟ್ ಮಾರ್ಚ್

ಗೌರಿ -ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿಯುತ ಹಬ್ಬ ಆಚರಣೆ, ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ರಕ್ಷಣೆಯ ಕುರಿತಂತೆ ಜನತೆಗೆ ಜಾಗೃತಿ ಮೂಡಿಸುವ ಸಲುವಾಗಿ ದೊಡ್ಡಬಳ್ಳಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳಲ್ಲಿ ಇನ್ಸ್ ಪೆಕ್ಟರ್ ಗಳ ನೇತೃತ್ವದಲ್ಲಿಂದು ರೂಟ್ ಮಾರ್ಚ್ ಕೈಗೊಳ್ಳಲಾಯಿತು.

ಗಣೇಶ ಹಬ್ಬದ ಕಾರಣ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ,‌ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಠಾಣಾ ಪೊಲೀಸರು ಸೂಕ್ಷ್ಮ ಸ್ಥಳಗಳಲ್ಲಿ ವಿಶೇಷ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಸಮಾಜದ ಶಾಂತಿ ಸೌಹಾರ್ದತೆ ಕಪಾಡುವ ಹಿನ್ನೆಲೆ ಮುಂಜಾಗ್ರತೆಯನ್ನು ಸಹ ವಹಿಸಿದ್ದಾರೆ. ಕೆಲ ಏರಿಯಾಗಳಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಈಗಾಗಲೇ ಗಣೇಶ ಪ್ರತಿಷ್ಠಾಪನೆಯಿಂದ ಹಿಡಿದು ವಿಸರ್ಜನೆವರೆಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!