
ಈರುಳ್ಳಿ ತುಂಬಿದ ಟೆಂಪೊ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬೆಂಗಳೂರು ಎಕ್ಸ್ಪ್ರೆಸ್ ಹೈವೆ ಅಂಚೆಪಾಳ್ಯ ಬಳಿ ನಡೆದಿದೆ.
ಈರುಳ್ಳಿ ತುಂಬಿದ್ದ ಟೆಂಪೋ ಕಂಟೇನರ್ ಗೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.
ಈರುಳ್ಳಿ ಟೆಂಪೋದಲ್ಲಿದ್ದ ಗಂಗಾಧರಪ್ಪ 55 ವರ್ಷ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ. ಕಂಟೇನರ್ ಚಾಲಕ ಓಬಣ್ಣಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆಯಲ್ಲಿ ಬಿದ್ದ ಟೆಂಪೊ ಹಾಗೂ ಕಂಟೇನರ್ ನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.