ಅಂಬ್ಲಿಕಲ್ ಶಿವಪ್ಪ ಎಸ್ಎಫ್ಐ ರಾಜ್ಯ ಅಧ್ಯಕ್ಷರಾಗಿ ಆಯ್ಕೆ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಬ್ಲಿಕಲ್ ಗ್ರಾಮದ ಎನ್ ಶಿವಪ್ಪ ಅವರು ಭಾರತ ವಿಧ್ಯಾರ್ಥಿ ಫೆಡರೇಷನ್‌ನ (ಎಸ್‌ಎಫ್‌ಐ) ಸಂಘಟನೆಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಇಬಿ ಸಮುದಾಯ ಭವನದಲ್ಲಿ ನಡೆದ ಎಸ್‌ಎಫ್‌ಐ ಸಂಘಟನೆಯ 16 ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಶಿವಪ್ಪ ಅವರು ಮುಳಬಾಗಿಲು ತಾಲೂಕು ಕಾರ್ಯದರ್ಶಿಯಾಗಿ ಅಧ್ಯಕ್ಷರಾಗಿ ಕೋಲಾರ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಎರಡು ಅವಧಿಗೆ ಅಧ್ಯಕ್ಷರಾಗಿ ಸಂಘಟನೆಯಲ್ಲಿ ಕೆಲಸ ಮಾಡಿದ್ದು ಮುಂದಿನ ಸಮ್ಮೇಳನದ ವರೆಗೆ ರಾಜ್ಯ ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!