ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ:ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನವ್ಹೆಂಬರ್. 04 ರಿಂದ ನವ್ಹೆಂಬರ್. 21ರ ವರೆಗೆ ನಡೆಯಲಿರುವ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ದ ಅಂಗವಾಗಿ ಕುಷ್ಠರೋಗದ ಕುರಿತು ಮಾಹಿತಿಯುಳ್ಳ ಸಾರ್ವಜನಿಕ ಜಾಗೃತಿಯ ಪೋಸ್ಟರ್ ಅನ್ನು ಸೋಮವಾರದಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಬಿಡುಗಡೆಗೊಳಿಸಿದರು.

ಜಿಲ್ಲೆಯಾದ್ಯಂತ ಕುಷ್ಠರೋಗ ಲಕ್ಷಣ ಕಂಡು ಬರುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಅಭಿಯಾನ ನಡೆಯಲ್ಲಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ, ಕುಷ್ಠರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸುವ ಜತೆಗೆ ರೋಗಗಳ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್ ಕುಮಾರ, ವಿಶ್ವಸಂಸ್ಥೆಯ ಸರ್ವೆಕ್ಷಣಾಧಿಕಾರಿ ಡಾ. ನಾಗರಾಜ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಹೇಮಾವತಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಸೀಮಾ ಮಾಬಳೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!