ಕೋವಿಡ್ – 19 ಸಾಂಕ್ರಾಮಿಕ ರೋಗ ನಿರ್ವಹಣೆಯ ವೇಳೆ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ಅವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿ ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಿದ್ದು, ಈ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ, ಆದೇಶಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ..?
ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಶರಣ್ ಪ್ರಕಾಶ್ ಪಾಟೀಲ್ ಒಳಗೊಂಡಿದ್ದಾರೆ.