
ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅವಣಿ ಗ್ರಾಮದಲ್ಲಿ ಮಂಗಳವಾರ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕನಸು ಸಾಕಾರಗೊಳ್ಳುತ್ತಿದ್ದು ಇದಕ್ಕೆ ದೇಶದ ಜನ ಮೂರನೇ ಬಾರಿಗೆ ಪ್ರಧಾನಿಯಾಗಿ ಮಾಡಿದ್ದು ಕಾರಣವಾಗಿದೆ ದೇಶದಲ್ಲಿ ಅತಿ ದೊಡ್ಡ ಬದಲಾವಣೆಗಳನ್ನು ಕಂಡಿದ್ದು ಸರ್ವರಿಗೂ ಸಮಪಾಲು ಸಮಬಾಳು ಎಂಬಂತೆ ಎಲ್ಲಾ ಜಾತಿ ವರ್ಗದವರನ್ನು ಸಮಾನವಾಗಿ ಕಾಣುವ ವಿಶ್ವದ ದೊಡ್ಡ ರಾಜಕೀಯ ಪಕ್ಷವಾಗಿ ಬಿಜೆಪಿ ಇದ್ದು ಯುವಕರು, ಮಹಿಳೆಯರು, ವಿದ್ಯಾರ್ಥಿಗಳು ಹೆಚ್ಚಾಗಿ ಸದಸ್ಯತ್ವ ಪಡೆಯಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಳಬಾಗಿಲು ಗ್ರಾಮಾಂತರ ಅಧ್ಯಕ್ಷ ನಂಗಲಿ ಸುರೇಶ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ರೈತ ಮೋರ್ಚಾ ಅಧ್ಯಕ್ಷ ಲಕ್ಷ್ಮೀನಾರಾಯಣ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚರಣ್, ಮುಖಂಡರಾದ ಸೂರಿ, ಆನಂದ್, ಪವನ್, ಲೋಕೇಶ್, ವಿಶ್ವನಾಥ್, ಷಣ್ಮುಖ ಮುಂತಾದವರು ಇದ್ದರು.