11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿ ಇಂದಿನಿಂದ ಆರಂಭ: ಉದ್ಘಾಟನಾ ಪಂದ್ಯದಲ್ಲಿ ಕಾದಾಡಲಿರುವ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಇಂದು(ಶುಕ್ರವಾರ) ಹೈದರಾಬಾದ್‌ನಲ್ಲಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಹಾಗೂ ತೆಲುಗು ಟೈಟಾನ್ಸ್‌ ತಂಡಗಳ ನಡುವೆ ಕಾದಾಟವಾಗಲಿದೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.

ಈ ಬಾರಿ ಟೂರ್ನಿಗೆ ಒಟ್ಟು 3 ನಗರಗಳು ಆತಿಥ್ಯ ವಹಿಸಲಿವೆ. ಮೊದಲ ಚರಣದ ಪಂದ್ಯಗಳು ಹೈದರಾಬಾದ್‌ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿವೆ. ಲೀಗ್‌ ಹಂತದ ಪಂದ್ಯಗಳು ಡಿ.24ರ ವರೆಗೂ ನಡೆಯಲಿದ್ದು, ಒಟ್ಟು 132 ಪಂದ್ಯಗಳು ನಡೆಯಲಿವೆ. ಟೂರ್ನಿಯ ಪ್ಲೇ-ಆಫ್‌ ಪಂದ್ಯಗಳ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.

ಟೂರ್ನಿಯಲ್ಲಿ ಒಟ್ಟು 12 ತಂಡಗಳು ಪಾಲ್ಗೊಳ್ಳಲಿದ್ದು, ಲೀಗ್‌ ಹಂತದಲ್ಲಿ ತಲಾ 2 ಬಾರಿ ಪರಸ್ಪರ ಸೆಣಸಾಡಲಿವೆ. ಲೀಗ್‌ ಹಂತ ಮುಕ್ತಾಯದ ಬಳಿಕ ಅಗ್ರ-6 ತಂಡಗಳು ಪ್ಲೇ-ಆಫ್‌ ಪ್ರವೇಶಿಸಲಿವೆ. ಪ್ರತಿ ದಿನವೂ 2 ಪಂದ್ಯಗಳು ಆಯೋಜನೆಗೊಳ್ಳಲಿದ್ದು, ಮೊದಲ ಪಂದ್ಯ ರಾತ್ರಿ 8 ಗಂಟೆಗೆ, 2ನೇ ಪಂದ್ಯ ರಾತ್ರಿ 9 ಗಂಟೆಗೆ ಶುರುವಾಗಲಿದೆ

ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್‌ ಮಾದರಿಯಲ್ಲಿ ಹೈದರಾಬಾದ್‌, ನೋಯ್ಡಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅ.18ರಿಂದ ನ.9ರ ವರೆಗೆ ಹೈದರಾಬಾದ್‌ನಲ್ಲಿ ಪಂದ್ಯಗಳು ನಡೆಯಲಿವೆ. ಬಳಿಕ ನ.10ರಿಂದ ಡಿ.1ರ ವರೆಗೆ ನೋಯ್ಡಾ ಹಾಗೂ ಡಿ.3ರಿಂದ 24ರ ವರೆಗೆ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದಿಲ್ಲ.

Leave a Reply

Your email address will not be published. Required fields are marked *